Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:14 - ಕನ್ನಡ ಸತ್ಯವೇದವು J.V. (BSI)

14 ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಲಾಬಾನನು, “ನಿಜವಾಗಿಯೂ ನೀನು ನನ್ನ ರಕ್ತಸಂಬಂಧಿ,” ಎಂದನು. ಅವನೊಂದಿಗೆ ಯಕೋಬನು ಒಂದು ತಿಂಗಳವರೆಗೂ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:14
11 ತಿಳಿವುಗಳ ಹೋಲಿಕೆ  

ನೀವು ದಯವಿಟ್ಟು ಶೆಕೆವಿುನ ಹಿರಿಯರನ್ನು ಮಾತಾಡಿಸಿ - ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವದು ಒಳ್ಳೇದೋ ಅಥವಾ ಒಬ್ಬನೇ ಆಳುವದು ಮೇಲೋ ಎಂದು ಅವರನ್ನು ಕೇಳಿ ನಾನು ಅವರ ರಕ್ತ ಸಂಬಂಧಿಯಾಗಿದ್ದೇನೆಂಬದನ್ನು ಜ್ಞಾಪಕಪಡಿಸಿರಿ ಅಂದನು.


ಅವನು ಆಕೆಯನ್ನು ನೋಡಿ- ಈಗ ಸರಿ; ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬೂ ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ; ಈಕೆಯು ನರನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು ಅಂದನು.


ಅನಂತರ ಇಸ್ರಾಯೇಲ್ಯರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ -


ವಿುತ್ರನನ್ನು ನಂಬಬೇಡ; ಆಪ್ತನಲ್ಲಿ ಭರವಸವಿಡದಿರು; ನಿನ್ನ ಎದೆಯ ಮೇಲೆ ಒರಗುವವಳಿಗೂ ನಿನ್ನ ಬಾಯಬಾಗಲನ್ನು ಭದ್ರವಾಗಿಟ್ಟುಕೋ.


ಆಮೇಲೆ ಲಾಬಾನನು ಅವನನ್ನು - ನೀನು ನನ್ನನ್ನು ಸಂಬಂಧಿಯೆಂದು ಸುಮ್ಮನೆ ಸೇವಿಸುವದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ ಎಂದು ಕೇಳಿದನು.


ನಾನು ನಿನ್ನ ತಂದೆಗೆ ಸೋದರಳಿಯನೂ ರೆಬೆಕ್ಕಳ ಮಗನೂ ಆಗಿದ್ದೇನೆ ಎಂದು ಹೇಳಿದಾಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.


ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.


ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ ಬನ್ನಿ; ನಾವು ಅವನ ಮೇಲೆ ಕೈಹಾಕಬಾರದು; ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು