Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:16 - ಕನ್ನಡ ಸತ್ಯವೇದವು J.V. (BSI)

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಖೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಹಿರಿಯವಳ ಹೆಸರು ಲೇಯಾ; ಕಿರಿಯವಳ ಹೆಸರು ರಾಹೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಲಾಬಾನನಿಗೆ ಇಬ್ಬರು ಪುತ್ರಿಯರಿದ್ದರು. ದೊಡ್ಡವಳ ಹೆಸರು ಲೇಯಳು, ಚಿಕ್ಕವಳ ಹೆಸರು ರಾಹೇಲಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:16
10 ತಿಳಿವುಗಳ ಹೋಲಿಕೆ  

ಇದಕ್ಕೆ ನೀವು ಸಾಕ್ಷಿಗಳು ಎಂದು ಹೇಳಿದ್ದಕ್ಕೆ ಊರುಬಾಗಲಲ್ಲಿ ಕೂಡಿದ್ದ ಹಿರಿಯರೂ ಎಲ್ಲಾ ಜನರೂ - ಹೌದು, ನಾವು ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಸತ್ಕಾರ್ಯವನ್ನು ಮಾಡು; ಬೇತ್ಲೆಹೇವಿುನಲ್ಲಿ ಘನವಂತನಾಗು.


ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು; ಅಲ್ಲಿ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು; ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.


ಆಕೆಯು ಯಾಕೋಬನಿಗೆ ಇವರನ್ನೂ ದೀನಳೆಂಬ ಹೆಣ್ಣುಮಗಳನ್ನೂ ಪದ್ದನ್ಅರಾವಿುನಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.


ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.


ಹೀಗಿರುವದರಿಂದ ಯಾಕೋಬನು ರಾಹೇಲಳನ್ನೂ ಲೇಯಳನ್ನೂ ತಾನು ಆಡುಕುರಿಗಳನ್ನು ಮೇಯಿಸುತ್ತಿದ್ದ ಅಡವಿಗೆ ಕರಸಿಕೊಂಡು


ಲೇಯಳು ತಿರಿಗಿ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡುಮಗುವನ್ನು ಹೆತ್ತಳು.


ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿಹೀನವಾಗಿದ್ದವು; ರಾಹೇಲಳು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.


ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಬರಮಾಡಿದನು.


ಆಮೇಲೆ ಲಾಬಾನನು ಅವನನ್ನು - ನೀನು ನನ್ನನ್ನು ಸಂಬಂಧಿಯೆಂದು ಸುಮ್ಮನೆ ಸೇವಿಸುವದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು