Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:17 - ಕನ್ನಡ ಸತ್ಯವೇದವು J.V. (BSI)

17 ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿಹೀನವಾಗಿದ್ದವು; ರಾಹೇಲಳು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾವಣ್ಯವತಿಯೂ ಆಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಲೇಯಾ ಹೊಳಪಿನ ಕಣ್ಣಿನವಳು. ರಾಖೇಲಳಾದರೋ ರೂಪವತಿ, ಲಾವಣ್ಯವತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಹೇಲಳು ಸುಂದರವಾಗಿದ್ದಳು. ಲೇಯಳ ಕಣ್ಣುಗಳು ಸೌಮ್ಯವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಲೇಯಳ ಕಣ್ಣುಗಳು ಕಾಂತಿಹೀನವಾಗಿದ್ದವು. ಆದರೆ ರಾಹೇಲಳು ಸುಂದರಿಯೂ ರೂಪವತಿಯೂ ಆಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:17
19 ತಿಳಿವುಗಳ ಹೋಲಿಕೆ  

ಅವನು ಐಗುಪ್ತದೇಶದ ಹತ್ತಿರಕ್ಕೆ ಬಂದಾಗ, ತನ್ನ ಹೆಂಡತಿಯಾದ ಸಾರಯಳಿಗೆ -


ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಅಳುವಿಕೆಯೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲದೆ ಇದ್ದಳು ಎಂಬದು.


ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ.


ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.


ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ; ಅವರು ನಿನಗೆ - ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂಬದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ ಎಂದು ಹೇಳುವರು.


ನಾನು ಪದ್ದನ್ಅರಾವಿುನಿಂದ ಬರುತ್ತಿರಲು ಕಾನಾನ್‍ದೇಶದಲ್ಲಿ ಎಫ್ರಾತನ್ನು ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತು ನನ್ನನ್ನು ಅಗಲಿಹೋದಳು. ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದು ಹೇಳಿದನು.


ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು; ಇವನು ತನ್ನ ಬಳಿಯಲ್ಲೇ ಇದ್ದದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವದನ್ನೂ ಚಿಂತಿಸಲಿಲ್ಲ. ಇದಲ್ಲದೆ ಯೋಸೇಫನು ರೂಪದಲ್ಲಿಯೂ ಮುಖಭಾವದಲ್ಲಿಯೂ ಸುಂದರನಾಗಿದ್ದನು.


ಯೋಸೇಫ, ಬೆನ್ಯಾಮೀನ್ ಇವರಿಬ್ಬರು ರಾಹೇಲಳಲ್ಲಿ ಹುಟ್ಟಿದವರು.


ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.


ಯಾಕೋಬನು ರಾಹೇಲಳನ್ನು ಮೆಚ್ಚಿಕೊಂಡು - ನಿನ್ನ ಕಿರೀ ಮಗಳಾದ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುವೆನು ಎಂದು ಹೇಳಲು


ಆ ಹುಡುಗಿ ಬಹು ಸುಂದರಿಯಾಗಿಯೂ ಇನ್ನೂ ಮದುವೆಯಿಲ್ಲದ ಕನ್ನಿಕೆಯಾಗಿಯೂ ಇದ್ದಳು. ಆಕೆ ಬುಗ್ಗೆಯ ಬಳಿಗೆ ಇಳಿದು ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ


ಅಬ್ರಾಮನು ಐಗುಪ್ತದೇಶಕ್ಕೆ ಬಂದಾಗ ಐಗುಪ್ತ್ಯರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿಯೆಂದರು.


ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.


ಯಾಕೋಬನು ರಾಹೇಲಳನ್ನೂ ಕೂಡಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳುವರುಷ ಸೇವೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು