Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:21 - ಕನ್ನಡ ಸತ್ಯವೇದವು J.V. (BSI)

21 ತರುವಾಯ ಯಾಕೋಬನು ಲಾಬಾನನಿಗೆ - ಗೊತ್ತುಮಾಡಿದ ಕಾಲವು ಮುಗಿದು ಹೋಯಿತು; ಆಕೆಯನ್ನು ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತರುವಾಯ ಯಕೋಬನು ಲಾಬಾನನಿಗೆ, “ನನ್ನ ಸೇವಾವಧಿ ಮುಗಿಯಿತು. ಆಕೆ ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡಿ,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:21
9 ತಿಳಿವುಗಳ ಹೋಲಿಕೆ  

ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ - ನನ್ನನ್ನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗಗೊಡಿಸು ಅನ್ನಲು ಅವನು - ಹೋಗಬಾರದು;


ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು.


ನಾನು ನಿನ್ನ ಸಂಗಮ ಮಾಡುವದಕ್ಕೆ ಒಪ್ಪುತ್ತೀಯಾ ಅನ್ನಲು ಆಕೆ - ನನ್ನಲ್ಲಿ ಬರಬೇಕಾದರೆ ನೀನು ಏನು ಕೊಡುತ್ತೀ ಎಂದು ಕೇಳಿದಳು.


ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ.


ಆದದರಿಂದ ಯಾಕೋಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು; ಆದರೂ ಆಕೆಯಲ್ಲಿ ಬಹಳ ಪ್ರೀತಿಯನ್ನಿಟ್ಟಿದ್ದದರಿಂದ ಅದು ಅವನಿಗೆ ಸ್ವಲ್ಪ ದಿವಸದಂತೆ ಕಾಣಿಸಿತು.


ಯಾಕೋಬನು ರಾಹೇಲಳನ್ನು ಮೆಚ್ಚಿಕೊಂಡು - ನಿನ್ನ ಕಿರೀ ಮಗಳಾದ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುವೆನು ಎಂದು ಹೇಳಲು


ಆ ಪುರುಷನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು - ಯೆಹೋವನ ಅನುಗ್ರಹದಿಂದ ಗಂಡುಮಗುವನ್ನು ಪಡೆದಿದ್ದೇನೆ ಎಂದು ಹೇಳಿದಳು.


ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರಸಿ ಔತಣವನ್ನು ಮಾಡಿಸಿದನು.


ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ ಅವಳ ವಿಷಯದಲ್ಲಿ ಸುಮ್ಮಸುಮ್ಮನೆ ಕೆಟ್ಟ ಮಾತುಗಳನ್ನು ಆಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು