Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:33 - ಕನ್ನಡ ಸತ್ಯವೇದವು J.V. (BSI)

33 ಆಕೆ ತಿರಿಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ಸಿಮೆಯೋನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆಕೆ, ಇನ್ನೊಮ್ಮೆ ಗರ್ಭಿಣಿಯಾಗಿ ಗಂಡು ಮಗುವನ್ನೇ ಹೆತ್ತಳು. “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆ, ಇದನ್ನು ತಿಳಿದೇ ಸರ್ವೇಶ್ವರ ನನಗೆ ಈ ಮಗನನ್ನು ದಯಪಾಲಿಸಿದರು,” ಎಂದು ಹೇಳಿ ಆ ಮಗನಿಗೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:33
12 ತಿಳಿವುಗಳ ಹೋಲಿಕೆ  

ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳಲ್ಲಿ ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡುಕೊಂಡು ನಿರ್ಭಯವಾಗಿದ್ದ ಆ ಊರಿನವರ ಮೇಲೆ ಬಿದ್ದು


ಯೋಸೇಫನಾದರೋ ಅವರ ಬಳಿಯಿಂದ ಒಂದು ಕಡೆಗೆ ಹೋಗಿ ಕಣ್ಣೀರು ಸುರಿಸಿದನು. ತರುವಾಯ ಅವರ ಬಳಿಗೆ ತಿರಿಗಿ ಬಂದು ಅವರ ಸಂಗಡ ಮಾತಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಾಗಿ ಅವನಿಗೆ ಬೇಡಿಗಳನ್ನು ಹಾಕಿಸಿದನು.


ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.


ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು


ಆಕೆಯು - ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ನಾನು ನನ್ನ ಗಂಡನಿಗೆ ಆರು ಮಂದಿ ಗಂಡುಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು ಎಂದು ಹೇಳಿ ಅದಕ್ಕೆ ಜೆಬುಲೂನ್ ಎಂದು ಹೆಸರಿಟ್ಟಳು.


ನಾನು ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆಂದು ಹೇಳಿ ಅದಕ್ಕೆ ಇಸ್ಸಾಕಾರೆಂದು ಹೆಸರಿಟ್ಟಳು.


ರಾಹೇಲಳು - ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಗೆದ್ದಿದ್ದೇನೆ ಎಂದು ಹೇಳಿ ಅದಕ್ಕೆ ನಫ್ತಾಲಿ ಎಂದು ಹೆಸರಿಟ್ಟಳು.


ರಾಹೇಲಳು - ದೇವರು ನನ್ನ ಕಡೆಗೆ ನ್ಯಾಯ ತೀರಿಸಿದ್ದಾನೆ; ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ ಎಂದು ಹೇಳಿ ಅದಕ್ಕೆ ದಾನ್ ಎಂದು ಹೆಸರಿಟ್ಟಳು.


ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗ ಶೆಮೂವೇಲ್,


ಯಾವನಾದರೂ ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದವರಾಗಿರಲಾಗಿ ಚೊಚ್ಚಲುಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ ಪಕ್ಷಕ್ಕೆ


ಬೆನ್ಯಾಮೀನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು