ಆದಿಕಾಂಡ 29:34 - ಕನ್ನಡ ಸತ್ಯವೇದವು J.V. (BSI)34 ಆಕೆಯು ತಿರಿಗಿ ಗರ್ಭಧರಿಸಿ ಗಂಡುಮಗುವನ್ನು ಹೆತ್ತು - ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು; ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ ಎಂದು ಹೇಳಿ ಅದಕ್ಕೆ ಲೇವಿಯೆಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಮತ್ತೊಮ್ಮೆ ಗರ್ಭಧರಿಸಿ ಗಂಡು ಮಗುವನ್ನೇ ಹೆತ್ತಳು. “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುತ್ತೇವೆ. ಅವರಿಗೆ ಮೂರು ಮಂದಿ ಗಂಡುಮಕ್ಕಳನ್ನು ಹೆತ್ತಿದ್ದೇನಲ್ಲವೆ,” ಎಂದುಕೊಂಡು ಆ ಮಗುವಿಗೆ ‘ಲೇವಿ’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಮತ್ತೊಮ್ಮೆ ಲೇಯಳು ಮಗನನ್ನು ಹೆತ್ತು, “ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಏಕೆಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ,” ಎಂದು ಹೇಳಿ, ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |