Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:35 - ಕನ್ನಡ ಸತ್ಯವೇದವು J.V. (BSI)

35 ಆಕೆಯು ತಿರಿಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು - ಈಗ ಯೆಹೋವನಿಗೆ ಉಪಕಾರಸ್ತುತಿ ಮಾಡುವೆನು ಎಂದು ಹೇಳಿ ಅದಕ್ಕೆ ಯೆಹೂದಾ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಗರ್ಭಧಾರಣೆಯಾಗುವದು ತಡವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮಗದೊಮ್ಮೆ ಗರ್ಭಧರಿಸಿ ಈ ಸಾರಿಯೂ ಗಂಡು ಮಗುವನ್ನೇ ಹೆತ್ತಳು. "ಈಗ ಸರ್ವೇಶ್ವರಸ್ವಾಮಿಯ ಸ್ತುತಿಮಾಡುತ್ತೇನೆ,“ ಎಂದು ಹೇಳಿ ಆ ಮಗುವಿಗೆ “ಯೆಹೂದ" ಎಂದು ನಾಮಕರಣ ಮಾಡಿದಳು. ಆ ಮೇಲೆ ಆಕೆಗೆ ಗರ್ಭಧಾರಣೆ ಆಗುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:35
13 ತಿಳಿವುಗಳ ಹೋಲಿಕೆ  

ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ಯಾಕೋಬನನ್ನು ಪಡೆದನು. ಯಾಕೋಬನು ಯೆಹೂದನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಪ್ರಬಲನಾದದರಿಂದಲೂ ರಾಜ್ಯಾಧಿಕಾರವು ಇವನ ಕುಲಕ್ಕೆ ಬಂದದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲನೆಂದು ಲಿಖಿತನಾಗಲಿಲ್ಲ; ಆದರೂ ಚೊಚ್ಚಲನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಯೆಹೂದ ಕುಲದ ವಿಷಯದಲ್ಲಿ ಹೀಗಂದನು - ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ತಪ್ಪಿಸಬೇಕು.


ಗಾದ್, ಆಶೇರ್ ಇವರಿಬ್ಬರು ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು. ಪದ್ದನ್ಅರಾವಿುನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.


ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);


ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 74,600 ಮಂದಿ.


ನೀವು ಆಯಾ ಕುಲಗಳಿಂದ ನೇವಿುಸಬೇಕಾದವರು ಯಾರಂದರೆ - ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,


ಲೇಯಳು ತನಗೆ ಹೆರಿಗೆ ನಿಂತುಹೋಗಿರುವದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವದಕ್ಕೆ ಒಪ್ಪಿಸಿದಳು.


ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು