Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:6 - ಕನ್ನಡ ಸತ್ಯವೇದವು J.V. (BSI)

6 ಅವನಿಗೆ ಕ್ಷೇಮವೋ ಎಂದು ಕೇಳಲು ಅವರು - ಕ್ಷೇಮ; ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಅವರು ಆರೋಗ್ಯವೇ?” ಎಂದು ಕೇಳಲು ಅವರು, “ಹೌದು ಆರೋಗ್ಯ; ಅಗೋ, ಅವರ ಮಗಳು ರಾಖೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೋಬನು, “ಅವನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅವರು, “ಅವನು ಕ್ಷೇಮವಾಗಿದ್ದಾನೆ. ಅಗೋ, ಆ ಕುರಿಗಳೊಂದಿಗೆ ಬರುತ್ತಿರುವವಳೇ ಅವನ ಮಗಳಾದ ರಾಹೇಲಳು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಕೋಬನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಿದಾಗ, ಆಗ ಅವರು, “ಕ್ಷೇಮವಾಗಿದ್ದಾನೆ, ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:6
8 ತಿಳಿವುಗಳ ಹೋಲಿಕೆ  

ಅವನು ಅಮಾಸನನ್ನು - ಸಹೋದರನೇ, ಕ್ಷೇಮವೋ ಎಂದು ಕೇಳಿ ಮುದ್ದಿಡುವದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು


ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ - ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿ ಅವನಿಗೆ ನನ್ನ ಹೆಸರಿನಲ್ಲಿ -


ದಾವೀದನು ತಾನು ತಂದವುಗಳನ್ನು ಸಾಮಾನುಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ


ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.


ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿ - ನೀವು ಹೇಳಿದ ಮುದುಕನಾಗಿರುವ ನಿಮ್ಮ ತಂದೆಗೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ ಎಂದು ಕೇಳಲು ಅವರು ಬೊಗ್ಗಿ ನಮಸ್ಕಾರಮಾಡಿ -


ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.


ಯಾಕೋಬನು - ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಕೂಡಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ ಅನ್ನಲು


ಅಲ್ಲಿ ಒಂದು ಬಾವಿಯ ಹತ್ತಿರ ಕೂತುಕೊಂಡಿರಲು ವಿುದ್ಯಾನ್ಯರ ಆಚಾರ್ಯನ ಏಳುಮಂದಿ ಹೆಣ್ಣುಮಕ್ಕಳು ಬಂದು ತಂದೆಯ ಕುರಿಗಳಿಗೆ ಕುಡಿಸುವದಕ್ಕೋಸ್ಕರ ನೀರು ಸೇದಿ ದೋಣಿಗಳಲ್ಲಿ ಹಾಕುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು