Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:8 - ಕನ್ನಡ ಸತ್ಯವೇದವು J.V. (BSI)

8 ಅವರು - ಹಿಂಡುಗಳೆಲ್ಲಾ ಕೂಡಿ ಬಂದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆಯುವ ತನಕ ಕುಡಿಸಕೂಡದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು, “ಇಲ್ಲ, ಕುರಿಗಾಹಿಗಳೆಲ್ಲ ಒಂದುಗೂಡಿ ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆಯುವ ತನಕ ಕುಡಿಸಕೂಡದು, ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವವರೆಗೆ ನಾವು ಬಾವಿಯ ಮೇಲಿರುವ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಅವು ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಅವರು, “ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಉರುಳಿಸುತ್ತಾರೆ. ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:8
8 ತಿಳಿವುಗಳ ಹೋಲಿಕೆ  

ಸಮಾಧಿಗೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವದನ್ನು ಕಂಡು


ಸಮಾಧಿಗೆ ಮುಚ್ಚಿದ್ದ ಕಲ್ಲು ಬಹಳ ದೊಡ್ಡದಾಗಿದ್ದದರಿಂದ ಅವರು - ಸಮಾಧಿಯ ಬಾಗಿಲಿಂದ ಆ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರಿದ್ದಾರೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಾ ಇರಲಾಗಿ


ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಐಗುಪ್ತ್ಯರು ಇಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವದಿಲ್ಲ; ಅದು ಅವರಿಗೆ ಅಸಹ್ಯ.


ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವದಕ್ಕಾಗುವದಿಲ್ಲ; ಹಾಗೆ ಕೊಡುವದು ನಮಗೆ ಅಪಮಾನ.


ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ತಿರಿಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುವರು.


ಯಾಕೋಬನು - ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಕೂಡಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ ಅನ್ನಲು


ಅವನು ಅವರೊಂದಿಗೆ ಮಾತಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳನ್ನು ಹೊಡಕೊಂಡು ಬಂದಳು; ಆಕೆಯೇ ಅವುಗಳನ್ನು ಮೇಯಿಸುವವಳಾಗಿದ್ದಳು.


ಅವರಿಬ್ಬರೂ ದಿನ್ನೆಯನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವದಕ್ಕೋಸ್ಕರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು - ದರ್ಶಿಯು ಊರಲ್ಲಿದ್ದಾನೋ ಎಂದು ಕೇಳಲು ಅವರು - ಇದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು