ಆದಿಕಾಂಡ 3:16 - ಕನ್ನಡ ಸತ್ಯವೇದವು J.V. (BSI)16 ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ." ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.” ಅಧ್ಯಾಯವನ್ನು ನೋಡಿ |