Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:18 - ಕನ್ನಡ ಸತ್ಯವೇದವು J.V. (BSI)

18 ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:18
20 ತಿಳಿವುಗಳ ಹೋಲಿಕೆ  

ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ ಮುಳ್ಳುಗಿಳ್ಳು ಮುಚ್ಚಿಕೊಂಡು ಹೋಗುವದು.


ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ಯೆಹೋವನು ಯೆಹೂದದವರಿಗೂ ಯೆರೂಸಲೇವಿುನವರಿಗೂ ಹೀಗೆ ಹೇಳುತ್ತಾನೆ - ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.


ನನ್ನ ಜನರ ಭೂವಿುಯ ಮೇಲೂ ಉತ್ಸಾಹಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆಗಳ ಮೇಲೂ ಮುಳ್ಳುಗಿಳ್ಳು ಹತ್ತಿಕೊಳ್ಳುವದು;


ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.


ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ ಉರುಲುಗಳೂ ತುಂಬಿವೆ; ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.


ಗೋದಿಗೆ ಬದಲಾಗಿ ಮುಳ್ಳುಗಳೂ ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ. ಹೀಗೆ ಯೋಬನ ಮಾತುಗಳು ಮುಗಿದವು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣುಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ಇಲ್ಲದಂತಾಗುವಿರಿ.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿದ್ದೀ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿದ್ದೀ.


ಮನುಷ್ಯರೇ, ಸಾಯಿರಿ ಎಂದು ಆಜ್ಞಾಪಿಸಿ ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.


ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ಒಬ್ಬನು ಯಾವದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.


ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ದೇಶವೆಲ್ಲಾ ಮುಳ್ಳುಪೊದೆಯಾಗಿರುವದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು