Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:22 - ಕನ್ನಡ ಸತ್ಯವೇದವು J.V. (BSI)

22 ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:22
15 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.


ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.


ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ನಿಮ್ಮ ಅಂತರಾತ್ಮವು ಯಾವಾಗಲೂ ಚೈತನ್ಯವುಳ್ಳದ್ದಾಗಿರಲಿ.


ಯೆಹೋವದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.


ಅವನು ಉತ್ಪತ್ತಿಯಾದ ಭೂವಿುಯನ್ನೇ ವ್ಯವಸಾಯ ಮಾಡುವದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು