ಆದಿಕಾಂಡ 3:24 - ಕನ್ನಡ ಸತ್ಯವೇದವು J.V. (BSI)24 ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು. ಅಧ್ಯಾಯವನ್ನು ನೋಡಿ |