Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:3 - ಕನ್ನಡ ಸತ್ಯವೇದವು J.V. (BSI)

3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಫಲದ ವಿಷಯವಾಗಿ - ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸಾಯುವಿರಿ ಎಂದು ದೇವರು ಹೇಳಿದ್ದಾನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:3
12 ತಿಳಿವುಗಳ ಹೋಲಿಕೆ  

ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಅದಕ್ಕೆ ದೇವರು - ನೀನು ಇದನ್ನು ಯರ್ಥಾರ್ಥಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನಾನಂತೂ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಇದನ್ನು ಹಿಡಿಯಬೇಡ, ಇದನ್ನು ರುಚಿನೋಡಬೇಡ,


ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ; ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.


ನೀವು ಬರೆದ ಸಂಗತಿಗಳನ್ನು ಕುರಿತು ನಾನು ಹೇಳುವ ಅಭಿಪ್ರಾಯವೇನಂದರೆ - ಸ್ತ್ರೀಸಂಪರ್ಕವಿಲ್ಲದೆ ಇರುವದು ಮನುಷ್ಯನಿಗೆ ಒಳ್ಳೇದು;


ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು;


ಆಗ ಸರ್ಪವು ಸ್ತ್ರೀಗೆ - ನೀವು ಹೇಗೂ ಸಾಯುವದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು