ಆದಿಕಾಂಡ 3:8 - ಕನ್ನಡ ಸತ್ಯವೇದವು J.V. (BSI)8 ತರುವಾಯ ಯೆಹೋವದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಸ್ತ್ರೀಪುರುಷರು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿ |