Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:20 - ಕನ್ನಡ ಸತ್ಯವೇದವು J.V. (BSI)

20 ಆಕೆಯು - ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ನಾನು ನನ್ನ ಗಂಡನಿಗೆ ಆರು ಮಂದಿ ಗಂಡುಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು ಎಂದು ಹೇಳಿ ಅದಕ್ಕೆ ಜೆಬುಲೂನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ಜೆಬುಲೂನ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನೆ. ಆದುದರಿಂದ ಅವರು ನನ್ನೊಡನೆಯೇ ವಾಸಿಸುವರು,” ಎಂದು ಹೆಳಿಕೊಂಡು ಆ ಮಗುವಿಗೆ ‘ಜೆಬುಲೂನ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ, ನನ್ನ ಗಂಡನು ಈಗಲಾದರೂ ನನ್ನನ್ನು ಗೌರವಿಸುವನು,” ಎಂದು ಹೇಳಿ, ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:20
15 ತಿಳಿವುಗಳ ಹೋಲಿಕೆ  

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.


ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು; ಅವನಿಗೆ ಹಡಗುಗಳು ಸೇರುವ ರೇವು ಇರುವದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವದು.


ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.


ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನೆಂಬ ಸಣ್ಣ ಗೋತ್ರದವರೂ ಗುಂಪಾಗಿ ಬರುವ ಯೆಹೂದಕುಲ ಪ್ರಭುಗಳೂ ಜೆಬುಲೂನ ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.


ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು; ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ


ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.


ಜೆಬುಲೂನನ ಮಕ್ಕಳಾದ ಸೆರೆದ್ ಏಲೋನ್ ಯಹ್ಲೇಲ್; - ಇವರೆಲ್ಲರು ಲೇಯಳ ಸಂತತಿಯವರು.


ಅದಕ್ಕೆ ಲೇಯಳು - ನೀನು ನನ್ನ ಗಂಡನನ್ನು ಅಪಹರಿಸಿದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಫಲಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ ಎಂದು ಹೇಳಲು ರಾಹೇಲಳು - ಒಳ್ಳೇದು, ನೀನು ನಿನ್ನ ಮಗನ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ ಅಂದಳು.


ಆಕೆಯು ತಿರಿಗಿ ಗರ್ಭಧರಿಸಿ ಗಂಡುಮಗುವನ್ನು ಹೆತ್ತು - ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು; ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ ಎಂದು ಹೇಳಿ ಅದಕ್ಕೆ ಲೇವಿಯೆಂದು ಹೆಸರಿಟ್ಟಳು.


ಲೇಯಳು ತಿರಿಗಿ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡುಮಗುವನ್ನು ಹೆತ್ತಳು.


ತರುವಾಯ ಆಕೆಯು ಹೆಣ್ಣುಮಗುವನ್ನು ಹೆತ್ತು ಅದಕ್ಕೆ ದೀನಾ ಎಂದು ಹೆಸರಿಟ್ಟಳು.


ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಬೇಕು ಎಂದು ಹೇಳಿದನು.


ಅವಳ ತಂದೆ ಅವಳನ್ನು ಅವನಿಗೆ ಕೊಡುವದಕ್ಕೆ ಒಪ್ಪದೆ ಹೋದರೆ ಆ ಮನುಷ್ಯನು ತಕ್ಕ ತೆರವನ್ನು ಹೇಗೂ ಕೊಡಬೇಕು.


ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ.


ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು