Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:25 - ಕನ್ನಡ ಸತ್ಯವೇದವು J.V. (BSI)

25 ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ - ನನಗೆ ಅಪ್ಪಣೆ ಕೊಡಬೇಕು; ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ರಾಖೇಲಳು ಜೋಸೆಫನನ್ನು ಹೆತ್ತ ಬಳಿಕ ಯಕೋಬನು ಲಾಬಾನನಿಗೆ, “ನನಗೆ ಅಪ್ಪಣೆಯಾಗಬೇಕು, ನಾನು ಸ್ವಂತ ಊರಿಗೂ ನಾಡಿಗೂ ಹಿಂದಿರುಗಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೋಸೇಫನು ಹುಟ್ಟಿದ ಮೇಲೆ, ಯಾಕೋಬನು ಲಾಬಾನನಿಗೆ, “ಈಗ ನಾನು ನನ್ನ ಸ್ವಂತ ಮನೆಗೆ ಹೋಗಲು ಅನುಮತಿ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ, “ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವಂತೆ ನನ್ನನ್ನು ಕಳುಹಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:25
13 ತಿಳಿವುಗಳ ಹೋಲಿಕೆ  

ಬಳಿಕ ಅವನೂ ಅವನ ಸಂಗಡ ಬಂದ ಮನುಷ್ಯರೂ ಊಟ ಉಪಚಾರಗಳನ್ನು ತೀರಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಿಗ್ಗೆ ಎದ್ದಾಗ ಅವನು - ನನ್ನ ದಣಿಯ ಬಳಿಗೆ ಹೊರಡುವದಕ್ಕೆ ನನಗೆ ಅಪ್ಪಣೆಯಾಗಲಿ ಎಂದು ಕೇಳಲು


ಅವನು ಅವರಿಗೆ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾನೆ; ಆದದರಿಂದ ನನ್ನನ್ನು ತಡೆಯಬೇಡಿರಿ; ನನ್ನ ದಣಿಯ ಬಳಿಗೆ ಹೋಗುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಹೇಳಲು


ಬೆಳಿಗ್ಗೆ ಲಾಬಾನನು ಎದ್ದು ತನ್ನ ಹೆಣ್ಣುಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಊರಿಗೆ ಹೊರಟುಹೋದನು.


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ; ಅಲ್ಲಿ ಕಂಬದ ಮೇಲೆ ಎಣ್ಣೆಹೊಯಿದು ನನಗೆ ಹರಕೆ ಮಾಡಿಕೊಂಡಿಯಷ್ಟೆ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೆ ತಿರಿಗಿಹೋಗು ಎಂದು ಹೇಳಿದನು.


ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ಯೆಹೋವನು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಹೊರಟುಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು