ಆದಿಕಾಂಡ 30:26 - ಕನ್ನಡ ಸತ್ಯವೇದವು J.V. (BSI)26 ನಾನು ಸೇವೆ ಮಾಡಿ ಪಡಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನಗೆ ಒಪ್ಪಿಸು; ನಾನು ಹೋಗುತ್ತೇನೆ. ನಾನು ನಿನಗೆ ಮಾಡಿದ ಸೇವೆ ನಿನಗೆ ತಿಳಿದೇ ಅದೆ ಎಂದು ಹೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನು ದುಡಿದು ಪಡೆದ ಹೆಂಡತಿಯರನ್ನೂ ಮಕ್ಕಳನ್ನೂ ಕಳಿಸಿಕೊಡಿ, ನಾನು ಹೊರಡುತ್ತೇನೆ. ನಿಮಗೆ ನಾನು ಮಾಡಿದ ಸೇವೆ ಎಷ್ಟೆಂದು ನಿಮಗೇ ತಿಳಿದಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾನು ಯಾರಿಗೋಸ್ಕರ ನಿನಗೆ ಸೇವೆ ಮಾಡಿದೆನೋ, ಆ ನನ್ನ ಹೆಂಡತಿಯರನ್ನೂ, ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀಯೆ,” ಎಂದನು. ಅಧ್ಯಾಯವನ್ನು ನೋಡಿ |