ಆದಿಕಾಂಡ 30:32 - ಕನ್ನಡ ಸತ್ಯವೇದವು J.V. (BSI)32 ಅದೇನಂದರೆ, ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ ವಿಕಾರವರ್ಣವುಳ್ಳವುಗಳನ್ನೆಲ್ಲಾ ಅಂದರೆ ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಗಳಲ್ಲಿ ಚುಕ್ಕೆ ಅಥವಾ ಮಚ್ಚೆ ಉಳ್ಳವುಗಳನ್ನೂ ವಿಂಗಡಿಸುವೆನು; [ಮುಂದೆ ಅಂಥಾದ್ದು ಹುಟ್ಟಿದರೆ] ಅದೇ ನನ್ನ ಸಂಬಳವೆಂದು ನೀನು ಭಾವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅದೇನೆಂದರೆ, ಈ ದಿನ ನಾನು ನಿಮ್ಮ ಮಂದೆಗಳಿಗೆ ಹೋಗಿ ವಿಕಾರ ಬಣ್ಣವುಳ್ಳವುಗಳನ್ನೆಲ್ಲ ಅಂದರೆ, ಕುರಿಮರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಮರಿಗಳಲ್ಲಿ ಚುಕ್ಕೆ ಅಥವಾ ಮಚ್ಚೆವುಳ್ಳವುಗಳನ್ನೂ ವಿಂಗಡಿಸುತ್ತೇನೆ. ಅವೇ ನನ್ನ ಸಂಬಳ ಎಂದು ನೀವು ಭಾವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದು ಹೋಗುವೆನು. ಕುರಿಗಳಲ್ಲಿ ಕಂದುಬಣ್ಣದವುಗಳನ್ನೆಲ್ಲಾ, ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ. ಅಧ್ಯಾಯವನ್ನು ನೋಡಿ |