ಆದಿಕಾಂಡ 30:40 - ಕನ್ನಡ ಸತ್ಯವೇದವು J.V. (BSI)40 ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು; ಮತ್ತು ಲಾಬಾನನ ಆಡುಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಯಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದೇ ಬೇರ್ಪಡಿಸಿದನು; ಲಾಬಾನನ ಆಡುಕುರಿಗಳ ಮುಖವನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಆ ಕುರಿಗಳ ಕಡೆಗೆ ತಿರುಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಯಾಕೋಬನು ಚುಕ್ಕೆಯುಳ್ಳ ಮತ್ತು ಕಪ್ಪಾಗಿರುವ ಆಡುಕುರಿಗಳನ್ನು ಮಂದೆಯ ಇತರ ಆಡುಕುರಿಗಳಿಂದ ಬೇರ್ಪಡಿಸಿದನು. ಯಾಕೋಬನು ತನ್ನ ಪಶುಗಳನ್ನು ಲಾಬಾನನ ಪಶುಗಳಿಂದ ಪ್ರತ್ಯೇಕವಾಗಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಯಾಕೋಬನು ಕುರಿಗಳನ್ನು ಬೇರೆ ಮಾಡಿ, ಲಾಬಾನನ ಮಂದೆಯಲ್ಲಿರುವ ರೇಖೆಗಳುಳ್ಳ ಆಡುಕುರಿಗಳೆದುರಾಗಿಯೂ ಕಂದು ಬಣ್ಣ ಉಳ್ಳವುಗಳೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ, ಅವುಗಳನ್ನು ಬೇರೆ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿ |