Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:41 - ಕನ್ನಡ ಸತ್ಯವೇದವು J.V. (BSI)

41 ಇದಲ್ಲದೆ ಬಲಿಷ್ಠವಾದ ಆಡುಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿಗಳಲ್ಲಿ ಕೋಲುಗಳನ್ನಿಟ್ಟನು; ಬಲಹೀನ ಆಡುಕುರಿಗಳ ಎದುರಾಗಿ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಇದಲ್ಲದೆ ಬಲಿಷ್ಠವಾದ ಆಡುಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮ ಮಾಡಲಿ ಎಂದು ಯಕೋಬನು ನೀರಿನ ತೊಟ್ಟಿಯಲ್ಲಿ ಆ ಕೋಲುಗಳನ್ನಿಟ್ಟನು. ಬಲಹೀನ ಆಡುಕುರಿಗಳ ಮುಂದೆ ಹಾಗೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಬಲವಾದ ಆಡುಕುರಿಗಳು ಸಂಗಮ ಮಾಡುವಾಗಲೆಲ್ಲ ಯಾಕೋಬನು ಆ ಕೊಂಬೆಗಳನ್ನು ಅವುಗಳ ಕಣ್ಣಿಗೆ ಎದುರಾಗಿಡುತ್ತಿದ್ದನು. ಅವುಗಳು ಆ ಕೊಂಬೆಗಳ ಸಮೀಪದಲ್ಲಿ ಸಂಗಮ ಮಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಬಲವಾದ ಕುರಿಗಳು ಸಂಗಮ ಮಾಡುವಾಗ ಯಾಕೋಬನು ಆ ಕುರಿಗಳು ಕೋಲುಗಳನ್ನು ನೋಡುತ್ತಾ ಗರ್ಭಧರಿಸುವ ಹಾಗೆ ಕೋಲುಗಳನ್ನು ಕುರಿಗಳ ಕಣ್ಣೆದುರಾಗಿ ದೋಣಿಗಳಲ್ಲಿ ಇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:41
3 ತಿಳಿವುಗಳ ಹೋಲಿಕೆ  

ಅವುಗಳನ್ನು ಆಡುಕುರಿಗಳ ಹಿಂಡು ನೀರುಕುಡಿಯುವ ದೋಣಿಗಳಲ್ಲಿ ಇಟ್ಟನು. ಆಡುಕುರಿಗಳು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮ ಕಾಲವಾಗಿತ್ತು.


ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು; ಮತ್ತು ಲಾಬಾನನ ಆಡುಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.


ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ ಬಿದ್ದವು, ಬಲಿಷ್ಠವಾದವುಗಳು ಯಾಕೋಬನ ಪಾಲಿಗೆ ಬಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು