Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:43 - ಕನ್ನಡ ಸತ್ಯವೇದವು J.V. (BSI)

43 ಯಾಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ದೊಡ್ಡ ಹಿಂಡುಗಳೂ ದಾಸದಾಸಿಯರೂ ಒಂಟೆಕತ್ತೆಗಳೂ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಈ ಪ್ರಕಾರ ಯಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ಹಿಂಡುಗಳು ಮಾತ್ರವಲ್ಲ ದಾಸದಾಸಿಯರೂ ಒಂಟೆ ಕತ್ತೆಗಳೂ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು. ಅನೇಕ ಸೇವಕರಿದ್ದರು; ಒಂಟೆಗಳಿದ್ದವು ಮತ್ತು ಕತ್ತೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದ್ದರಿಂದ, ಬಹು ಕುರಿಗಳೂ ದಾಸದಾಸಿಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:43
18 ತಿಳಿವುಗಳ ಹೋಲಿಕೆ  

ನಾನು ಬರುವದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ; ಈಗ ಬಹಳವಾಗಿ ಹೆಚ್ಚಾಯಿತು. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ.


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟದ್ದರಿಂದ ಅವನು ಧನವಂತನಾದನು.


ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.


ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆನು; [ಇವರಿಂದ] ಹುಟ್ಟು ಗುಲಾಮರು ಉಂಟಾದರು; ಇದಲ್ಲದೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಲು ದನಕುರಿಗಳ ಧನವುಳ್ಳವನಾದೆನು;


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರತರಿಸಿ ಆಕೆಯ ನಿವಿುತ್ತ ಅಬ್ರಾಮನಿಗೆ ಉಪಕಾರ ಮಾಡಿದನು. ಆಗ ಅಬ್ರಾಮನಿಗೆ ಕುರಿದನಗಳೂ ಗಂಡು ಹೆಣ್ಣು ಕತ್ತೆಗಳೂ ದಾಸದಾಸಿಯರೂ ಒಂಟೆಗಳೂ ದೊರೆತವು.


ಕಾಡಿನಿಂದ ಸೌದೆಯನ್ನು ತರಬೇಕಾಗುವದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವದಿಲ್ಲ; ಆಯುಧಗಳನ್ನೇ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಕರ್ತನಾದ ಯೆಹೋವನ ನುಡಿ.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ಅವರ ಸಂಪತ್ತು ಹೆಚ್ಚಿದ್ದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವದಕ್ಕೆ ಅನುಕೂಲವಿರಲಿಲ್ಲ; ಅವರ ಪಶುಗಳು ಬಹಳವಾಗಿದ್ದದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆಹೋಯಿತು.


ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ


ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ ಬಿದ್ದವು, ಬಲಿಷ್ಠವಾದವುಗಳು ಯಾಕೋಬನ ಪಾಲಿಗೆ ಬಿದ್ದವು.


ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು; ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟು ಐಶ್ವರ್ಯವುಂಟಾಯಿತು ಎಂಬದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.


ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು