Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:6 - ಕನ್ನಡ ಸತ್ಯವೇದವು J.V. (BSI)

6 ರಾಹೇಲಳು - ದೇವರು ನನ್ನ ಕಡೆಗೆ ನ್ಯಾಯ ತೀರಿಸಿದ್ದಾನೆ; ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ ಎಂದು ಹೇಳಿ ಅದಕ್ಕೆ ದಾನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:6
15 ತಿಳಿವುಗಳ ಹೋಲಿಕೆ  

ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.


ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.


ಆದಕಾರಣ ಬೈಲುಗಾಳಿಯು ಬಡಿದುಕೊಂಡು ಹೋಗುವ ಒಣಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.


ಆಗ ನಾನು ಯೆಹೋವನ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆನು.


ದಾನ್‍ಕುಲದ ವಿಷಯದಲ್ಲಿ ಹೀಗಂದನು - ದಾನ್‍ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ.


ದಾನನ ಮಗನಾದ ಹುಶೀಮ್; ನಫ್ತಾಲಿಯ ಮಕ್ಕಳಾದ ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್; -


ದಾನ್, ನಫ್ತಾಲಿಯರು ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು.


ಅವನು ಅವಳನ್ನು ಕೂಡಲು ಬಿಲ್ಹಳು ಗರ್ಭಿಣಿಯಾಗಿ ಗಂಡುಮಗುವನ್ನು ಹೆರಲು


ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು


ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 62,700 ಮಂದಿ.


ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು