Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:12 - ಕನ್ನಡ ಸತ್ಯವೇದವು J.V. (BSI)

12 ಆತನು ನನಗೆ - ಲಾಬಾನನು ನಿನ್ನ ವಿಷಯದಲ್ಲಿ ನಡಕೊಂಡ ರೀತಿಯನ್ನು ನಾನು ನೋಡಿದ್ದೇನೆ; ಆದದರಿಂದ ನೀನು ಕಣ್ಣೆತ್ತಿ ನೋಡು; ಕುರಿಗಳ ಮೇಲೆ ಹಾರುವ ಟಗರುಗಳೆಲ್ಲವೂ ರೇಖೆ ಚುಕ್ಕೆ ಮಚ್ಚೆಗಳುಳ್ಳವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆತ ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ. ಆದುದರಿಂದಲೇ ಮೇಕೆಗಳ ಮೇಲೆ ಹಾರುವ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿವೆ, ಕಣ್ಣೆತ್ತಿನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ದೇವದೂತನು ನನಗೆ, ‘ನೋಡು ಚುಕ್ಕೆಮಚ್ಚೆಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ನನಗೆ, ‘ನಿನ್ನ ಕಣ್ಣುಗಳನ್ನೆತ್ತಿ ಕುರಿಗಳನ್ನೇರುವ ಎಲ್ಲಾ ಟಗರುಗಳನ್ನು ನೋಡು. ಅವು ಚುಕ್ಕೆ, ಮಚ್ಚೆ, ರೇಖೆಯೂ ಉಳ್ಳವುಗಳಾಗಿವೆ. ಏಕೆಂದರೆ ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ಕಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:12
13 ತಿಳಿವುಗಳ ಹೋಲಿಕೆ  

ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆಯಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ, ಎಂದು ಹೇಳಿದನು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ನಾನು ನಡೆಯುವದನ್ನೂ ಮಲಗುವದನ್ನೂ ಶೋಧಿಸಿ ಗ್ರಹಿಸಿಕೊಳ್ಳುತ್ತೀ; ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.


ಕುರಿಗಳು ಸಂಗಮಮಾಡುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳ ಮೇಲೆ ಹಾರಿದ ಟಗರುಗಳೆಲ್ಲವೂ ರೇಖೆ ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು