ಆದಿಕಾಂಡ 31:13 - ಕನ್ನಡ ಸತ್ಯವೇದವು J.V. (BSI)13 ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ; ಅಲ್ಲಿ ಕಂಬದ ಮೇಲೆ ಎಣ್ಣೆಹೊಯಿದು ನನಗೆ ಹರಕೆ ಮಾಡಿಕೊಂಡಿಯಷ್ಟೆ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೆ ತಿರಿಗಿಹೋಗು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ಸ್ತಂಭವನ್ನು ಅಭಿಷೇಕಿಸಿ, ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದಿಂದ ಹೊರಟು, ನಿನ್ನ ಬಂಧುಗಳ ದೇಶಕ್ಕೆ ಹಿಂದಿರುಗಿ ಹೋಗು,’ ಎಂದು ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |