Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:15 - ಕನ್ನಡ ಸತ್ಯವೇದವು J.V. (BSI)

15 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ದ್ರವ್ಯವನ್ನು ತಾನೇ ನುಂಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ನಮ್ಮನ್ನು ಅನ್ಯರೆಂದೇ ಎಣಿಸುತ್ತಾರೆ; ನಮ್ಮನ್ನು ಮಾರಿ, ನಮ್ಮ ಮೂಲಕ ದೊರಕಿದ ಹಣವನ್ನು ಅವರೇ ನುಂಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ನಮ್ಮನ್ನು ಅನ್ಯರಂತೆ ಕಂಡನು; ಅವನು ನಮ್ಮನ್ನು ನಿನಗೆ ಮಾರಿದ್ದಾನೆ; ನಮ್ಮ ಐಶ್ವರ್ಯವನ್ನೆಲ್ಲ ಅವನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:15
9 ತಿಳಿವುಗಳ ಹೋಲಿಕೆ  

ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ.


ನಾನು ಸೇವೆ ಮಾಡಿ ಪಡಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನಗೆ ಒಪ್ಪಿಸು; ನಾನು ಹೋಗುತ್ತೇನೆ. ನಾನು ನಿನಗೆ ಮಾಡಿದ ಸೇವೆ ನಿನಗೆ ತಿಳಿದೇ ಅದೆ ಎಂದು ಹೇಳಲು


ಸಾಯಂಕಾಲದಲ್ಲಿ ತನ್ನ ಹಿರೀ ಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಕೂಡಿದನು.


ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು - ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಬಾಧ್ಯತೆಯೂ ಇನ್ನೇನದೆ?


ಆಗಲಿ; ದೇವರು ನಮ್ಮ ತಂದೆಯಿಂದ ತೆಗೆದ ಆಸ್ತಿಯೆಲ್ಲಾ ನಮಗೂ ನಮ್ಮ ಮಕ್ಕಳಿಗೂ ಬಂತಲ್ಲಾ. ಆದದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು ಎಂದು ಉತ್ತರ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು