ಆದಿಕಾಂಡ 31:16 - ಕನ್ನಡ ಸತ್ಯವೇದವು J.V. (BSI)16 ಆಗಲಿ; ದೇವರು ನಮ್ಮ ತಂದೆಯಿಂದ ತೆಗೆದ ಆಸ್ತಿಯೆಲ್ಲಾ ನಮಗೂ ನಮ್ಮ ಮಕ್ಕಳಿಗೂ ಬಂತಲ್ಲಾ. ಆದದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೇವರು ನಮ್ಮ ತಂದೆಯಿಂದ ಕಿತ್ತುಕೊಂಡ ಈ ಆಸ್ತಿಯೆಲ್ಲ ನಮ್ಮದಾಗಿದೆ, ನಮ್ಮ ಮಕ್ಕಳದಾಗಿದೆ. ಆದುದರಿಂದ ದೇವರು ನಿಮಗೆ ಹೇಳದಂತೆಯೇ ಮಾಡಿ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರು ಈ ಐಶ್ವರ್ಯವನ್ನೆಲ್ಲ ನಮ್ಮ ತಂದೆಯಿಂದ ತೆಗೆದುಕೊಂಡಿದ್ದಾನೆ. ಈಗ ಅದು ನಮಗೂ ನಮ್ಮ ಮಕ್ಕಳಿಗೂ ಸೇರಿದೆ. ಆದ್ದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು,” ಎಂದರು. ಅಧ್ಯಾಯವನ್ನು ನೋಡಿ |