Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:17 - ಕನ್ನಡ ಸತ್ಯವೇದವು J.V. (BSI)

17 ಆಗ ಯಾಕೋಬನು ತನ್ನ ಮಕ್ಕಳನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಂತೆಯೇ ಯಕೋಬನು ತನ್ನ ಮಕ್ಕಳನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ ಹೊರಡಲು ಅಣಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಯಾಕೋಬನು ತನ್ನ ಪ್ರಯಾಣಕ್ಕಾಗಿ ಸಿದ್ಧತೆ ಮಾಡಿದನು. ಅವನು ತನ್ನ ಗಂಡುಮಕ್ಕಳನ್ನು ಮತ್ತು ಹೆಂಡತಿಯರನ್ನು ಒಂಟೆಗಳ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯಾಕೋಬನು ಎದ್ದು ತನ್ನ ಮಕ್ಕಳನ್ನೂ, ತನ್ನ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:17
5 ತಿಳಿವುಗಳ ಹೋಲಿಕೆ  

ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೊರಟನು.


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ ದಣಿಯ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಗೆ ಬಂದು ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ಆಗಲಿ; ದೇವರು ನಮ್ಮ ತಂದೆಯಿಂದ ತೆಗೆದ ಆಸ್ತಿಯೆಲ್ಲಾ ನಮಗೂ ನಮ್ಮ ಮಕ್ಕಳಿಗೂ ಬಂತಲ್ಲಾ. ಆದದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು ಎಂದು ಉತ್ತರ ಕೊಟ್ಟರು.


ತಾನು ಗಳಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ ಪದ್ದನ್ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವದಕ್ಕಾಗಿ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು