ಆದಿಕಾಂಡ 31:18 - ಕನ್ನಡ ಸತ್ಯವೇದವು J.V. (BSI)18 ತಾನು ಗಳಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ ಪದ್ದನ್ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವದಕ್ಕಾಗಿ ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೆಸಪೊಟೇಮಿಯಾದಲ್ಲಿ ತಾನು ಗಳಿಸಿಕೊಂಡಿದ್ದ ಆಸ್ತಿಯನ್ನೆಲ್ಲ ತೆಗೆದುಕೊಂಡು, ಜಾನುವಾರುಗಳನ್ನೆಲ್ಲ ಅಟ್ಟಿಕೊಂಡು ಕಾನಾನ್ ನಾಡಿಗೆ, ತನ್ನ ತಂದೆ ಇಸಾಕನ ಬಳಿಗೆ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಂತರ ಅವರೆಲ್ಲರೂ, ಯಾಕೋಬನ ತಂದೆ ವಾಸಿಸಿದ ಸ್ಥಳವಾದ ಕಾನಾನಿಗೆ ಮರಳಿ ಪ್ರಯಾಣ ಬೆಳೆಸಿದರು. ಯಾಕೋಬನು ಹೊಂದಿದ್ದ ಎಲ್ಲಾ ಆಡುಕುರಿಗಳ ಮಂದೆಗಳು ಅವರ ಮುಂದೆ ನಡೆದವು. ಅವನು ಪದ್ದನ್‌ಅರಾಮಿನಲ್ಲಿದ್ದಾಗ ಹೊಂದಿಕೊಂಡಿದ್ದ ಪ್ರತಿಯೊಂದನ್ನೂ ಅವರು ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ತನ್ನ ಎಲ್ಲಾ ಪಶುಗಳನ್ನೂ, ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ, ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶದಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ತೆಗೆದುಕೊಂಡು ಹೊರಟನು. ಅಧ್ಯಾಯವನ್ನು ನೋಡಿ |