Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:19 - ಕನ್ನಡ ಸತ್ಯವೇದವು J.V. (BSI)

19 ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:19
19 ತಿಳಿವುಗಳ ಹೋಲಿಕೆ  

ಅನಂತರ ಆಕೆಯು ಪೂಜೆಯ ಬೊಂಬೆಯನ್ನು ತಂದು ಹಾಸಿಗೆಯ ಮೇಲೆ ಮಲಗಿಸಿ ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ಹಾಕಿ ಕಂಬಳಿಯನ್ನು ಹೊದಿಸಿದಳು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.


ಮಾರ್ಗವು ಒಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ ವಿಗ್ರಹಗಳನ್ನು ಪ್ರಶ್ನೆಕೇಳಿ ಕಾಳಿಜವನ್ನು ಪರೀಕ್ಷಿಸಿದ್ದಾನೆ.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ.


ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ. ನಮ್ಮ ಬಂಧುಗಳ ಎದುರಾಗಿ ನನ್ನ ಸೊತ್ತನ್ನು ಪರೀಕ್ಷಿಸಬಹುದು; ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.


ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.


ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಅದಲ್ಲದೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಓಡಿಹೋದನು.


ರಾಹೇಲಳು ತನ್ನ ತಂದೆಗೆ - ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ; ನಾನು ಮುಟ್ಟಾಗಿದ್ದೇನೆ ಎಂದು ಹೇಳಿದ್ದರಿಂದ ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ನನ್ನ ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.


ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಾನೆಂಬ ವರ್ತಮಾನವು ತಾಮಾರಳಿಗೆ ತಿಳಿದು ಬಂತು.


ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;


ಎರಡು ವರುಷಗಳಾದನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀವಿುನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು