Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:26 - ಕನ್ನಡ ಸತ್ಯವೇದವು J.V. (BSI)

26 ಲಾಬಾನನು ಯಾಕೋಬನಿಗೆ - ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಓಡಿ ಬಂದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಲಾಬಾನನು ಯಕೋಬನಿಗೆ, “ನೀನು ಹೀಗೆ ಮಾಡಬಹುದೆ? ನನ್ನ ಹೆಣ್ಣು ಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದ ಕೈದಿಗಳಂತೆ ಎಳೆದುಕೊಂಡು ಓಡಿಬಂದಿರುವೆಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಲಾಬಾನನು ಯಾಕೋಬನಿಗೆ, “ನೀನು ನನಗೇಕೆ ಮೋಸ ಮಾಡಿದೆ? ಯುದ್ಧದಲ್ಲಿ ಸೆರೆ ಒಯ್ಯುವ ಸ್ತ್ರೀಯರಂತೆ, ನೀನು ನನ್ನ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಲಾಬಾನನು ಯಾಕೋಬನಿಗೆ, “ನೀನು ಏನು ಮಾಡಿದೆ? ನನಗೆ ತಿಳಿಸದೆ ಮೋಸಮಾಡಿದ್ದೀಯೆ ಮತ್ತು ನನ್ನ ಪುತ್ರಿಯರನ್ನು ಯುದ್ಧದಲ್ಲಿ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಹೋದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:26
17 ತಿಳಿವುಗಳ ಹೋಲಿಕೆ  

ಅದರಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು; ಆದರೆ ಯಾರನ್ನೂ ಕೊಂದಿರಲಿಲ್ಲ.


ದಾವೀದನು - ನಾನೇನು ತಪ್ಪು ಮಾಡಿದೆನು? ಬರೀ ಮಾತಾಡಿದೆನಷ್ಟೆ ಎಂದು ಹೇಳಿ ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ


ಆಗ ಸೌಲನು ಯೋನಾತಾನನನ್ನು - ನೀನು ಏನು ಮಾಡಿದ್ದೀ, ಹೇಳು ಎಂದು ಕೇಳಲು ಅವನು - ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ಸಾಯುವದಕ್ಕೆ ಸಿದ್ಧನಾಗಿದ್ದೇನೆ ಎಂದು ಉತ್ತರಕೊಟ್ಟನು.


ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.


ಅವರ ಮಕ್ಕಳನ್ನೂ ಹೆಂಡರನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ಬಾಚಿಕೊಂಡರು.


ಆಗ ಯಾಕೋಬನು ಕೋಪಿಸಿಕೊಂಡು ಲಾಬಾನನನ್ನು ಗದರಿಸಿ - ನೀನು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹಮಾಡಿದೆನು?


ಆಗಲಿ; ದೇವರು ನಮ್ಮ ತಂದೆಯಿಂದ ತೆಗೆದ ಆಸ್ತಿಯೆಲ್ಲಾ ನಮಗೂ ನಮ್ಮ ಮಕ್ಕಳಿಗೂ ಬಂತಲ್ಲಾ. ಆದದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು ಎಂದು ಉತ್ತರ ಕೊಟ್ಟರು.


ಅದಕ್ಕೆ ಅಬೀಮೆಲೆಕನು - ನೀನು ನಮಗೆ ಹೀಗೆ ಯಾಕೆ ಮಾಡಿದಿ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಕೂಡುವದಕ್ಕೆ ಆಸ್ಪದವಾಗಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ ಎಂದು ಹೇಳಿ ತನ್ನ ಪ್ರಜೆಗಳಿಗೆ -


ಆಗ ಫರೋಹನು ಅಬ್ರಾಮನನ್ನು ಕರಿಸಿ - ಯಾಕೆ ಹೀಗೆ ಮಾಡಿದೆ? ಹೆಂಡತಿಯೆಂದು ಯಾಕೆ ನನಗೆ ತಿಳಿಸಲಿಲ್ಲ?


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ಯೆಹೋವದೇವರು ಸ್ತ್ರೀಯನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಸ್ತ್ರೀಯು - ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು ಎಂದು ಉತ್ತರ ಕೊಟ್ಟಳು.


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.


ಪಿಲಾತನು - ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನವೂ ಮಹಾಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿದ್ದಕ್ಕೆ


ಲಾಬಾನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಸಿದನು. ಲಾಬಾನನೂ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿದ್ದನು.


ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಬಂದಿ? ನನಗೆ ತಿಳಿಸಿದ್ದರೆ ನಾನು ಸಂಗೀತಮಾಡಿಸಿ ಮದ್ದಳೆ, ವೀಣೆ ಮುಂತಾದ ವಾದ್ಯಗಳೊಡನೆ ಸಂತೋಷದಿಂದ ನಿನ್ನನ್ನು ಸಾಗಕಳುಹಿಸುತ್ತಿದ್ದೆನು.


ಬೆಳಿಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು