ಆದಿಕಾಂಡ 31:30 - ಕನ್ನಡ ಸತ್ಯವೇದವು J.V. (BSI)30 ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು. ಅಧ್ಯಾಯವನ್ನು ನೋಡಿ |