Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:35 - ಕನ್ನಡ ಸತ್ಯವೇದವು J.V. (BSI)

35 ರಾಹೇಲಳು ತನ್ನ ತಂದೆಗೆ - ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ; ನಾನು ಮುಟ್ಟಾಗಿದ್ದೇನೆ ಎಂದು ಹೇಳಿದ್ದರಿಂದ ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ರಾಖೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿಮ್ಮ ಮುಂದೆ ಎದ್ದು ನಿಂತುಕೊಳ್ಳಲಾಗದೆ ಇದ್ದೇನೆ, ಕೋಪಿಸಿಕೊಳ್ಳಬೇಡಿ, ನಾನು ಮುಟ್ಟಾಗಿದ್ದೇನೆ,” ಎಂದು ಹೇಳಿದಳು. ಎಂದೇ ಲಾಬಾನನು ಎಷ್ಟು ಹುಡುಕಿ ನೋಡಿದರೂ ಆ ವಿಗ್ರಹಗಳನ್ನು ಕಂಡುಹಿಡಿಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೇ ಇರುವುದರಿಂದ, ನನ್ನ ಮೇಲೆ ಕೋಪಬಾರದೆ ಇರಲಿ. ಏಕೆಂದರೆ ನಾನು ಮುಟ್ಟಾಗಿದ್ದೇನೆ,” ಎಂದಳು. ಅವನು ಹುಡುಕಿ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:35
12 ತಿಳಿವುಗಳ ಹೋಲಿಕೆ  

ತಲೆನರೆತ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು ಎಂದು ಬರೆದದೆ. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ.


ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣಭಯದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.


ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಬೇಕು; ಇದು ಧರ್ಮ.


ಆಕೆಯು ಅದೋನೀಯನಿಗಾಗಿ ಮಾತಾಡುವದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕೂತು ರಾಜಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕೂತುಕೊಂಡು -


ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದವರೆಗೆ ಅಶುದ್ಧರಾಗುವರು.


ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ.


ಆಗ ಯಾಕೋಬನು ಕೋಪಿಸಿಕೊಂಡು ಲಾಬಾನನನ್ನು ಗದರಿಸಿ - ನೀನು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹಮಾಡಿದೆನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು