Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:36 - ಕನ್ನಡ ಸತ್ಯವೇದವು J.V. (BSI)

36 ಆಗ ಯಾಕೋಬನು ಕೋಪಿಸಿಕೊಂಡು ಲಾಬಾನನನ್ನು ಗದರಿಸಿ - ನೀನು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಯಕೋಬನಿಗೆ ಸಿಟ್ಟು ಬಂದಿತು, ಅವನು ಲಾಬಾನನೊಡನೆ ಹೀಗೆಂದು ವಾಗ್ವಾದ ಮಾಡಿದನು - “ನೀವು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರಲು ನಾನು ಮಾಡಿದ ತಪ್ಪೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ಯಾಕೋಬನು ತುಂಬಾ ಕೋಪಗೊಂಡು, “ನಾನು ಯಾವ ತಪ್ಪು ಮಾಡಿದೆ? ಯಾವ ನಿಯಮವನ್ನು ನಾನು ಉಲ್ಲಂಘಿಸಿರುವೆ? ನನ್ನನ್ನು ಬೆನ್ನಟ್ಟಿಕೊಂಡು ಬಂದು ತಡೆಯಲು ನಿನಗೆ ಯಾವ ಹಕ್ಕಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಯಾಕೋಬನು ಕೋಪಗೊಂಡು ಲಾಬಾನನೊಂದಿಗೆ ವಾದಿಸಿದನು. ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನನ್ನನ್ನು ಬೆನ್ನಟ್ಟಿ ಬರುವುದಕ್ಕೆ ನನ್ನ ಅಪರಾಧವೇನು?” ನನ್ನ ಪಾಪವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:36
14 ತಿಳಿವುಗಳ ಹೋಲಿಕೆ  

ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು - ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ ಎಂದು ಹೇಳಿದನು.


ನಾಮಾನನು ಇದನ್ನು ಕೇಳಿ ಕೋಪಗೊಂಡು - ಇದೇನು! ಅವನು ಹೇಗೂ ಹೊರಗೆ ಬಂದು ನಿಂತು ತನ್ನ ದೇವರಾದ ಯೆಹೋವನ ಹೆಸರು ಹೇಳಿ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.


ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು.


ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಥೆಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಕೂಡಿ ಇಸ್ರಾಯೇಲ್ಯರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ನಡಿಸಿದನು; ಅದು ಆಗಬಾರದ ಕಾರ್ಯ.


ಅವನು ಆಕೆಯ ಮೇಲೆ ಕೋಪಗೊಂಡು - ದೇವರು ನಿನಗೆ ಮಕ್ಕಳನ್ನು ಕೊಡದೆಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ ಅಂದನು.


ರಾಹೇಲಳು ತನ್ನ ತಂದೆಗೆ - ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ; ನಾನು ಮುಟ್ಟಾಗಿದ್ದೇನೆ ಎಂದು ಹೇಳಿದ್ದರಿಂದ ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.


ನನ್ನ ಸಾಮಾನನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನವರ ಮುಂದೆಯೂ ನಿನ್ನವರ ಮುಂದೆಯೂ ಅದನ್ನು ತಂದಿಡು ನೋಡೋಣ; ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.


ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತುಹೋಗಿದ್ದರೆ ಎಷ್ಟೋ ಮೇಲಾಗಿತ್ತು ಎಂದೂ


ಅದಕ್ಕೆ ಯೋನಾತಾನನು - ಅವನು ಯಾಕೆ ಸಾಯಬೇಕು, ಅವನು ಏನು ಮಾಡಿದನು ಎಂದು ತನ್ನ ತಂದೆಯನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು