Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:40 - ಕನ್ನಡ ಸತ್ಯವೇದವು J.V. (BSI)

40 ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು; ನಿದ್ದೆ ಮಾಡುವದಕ್ಕಾದರೂ ಅವಕಾಶವಾಗಲಿಲ್ಲ; ನನ್ನ ಸ್ಥಿತಿ ಹೀಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಹಗಲಿನಲ್ಲಿ ಸೂರ್ಯನಿಂದ ನನ್ನ ಶಕ್ತಿಯನ್ನು ಕುಂದಿಸಿದೆ; ರಾತ್ರಿಯಲ್ಲಿ ಚಳಿಯಿಂದ ನನಗೆ ನಿದ್ರೆಯು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:40
13 ತಿಳಿವುಗಳ ಹೋಲಿಕೆ  

ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ


ಯಾಕೋಬನು ಪದ್ದನ್ ಅರಾವಿುಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ [ಕುರಿಗಳನ್ನು] ಕಾದನು.


ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಕಾಡುಮೃಗಗಳು ಕೊಂದ ಪಶುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ಬದಲುಕೊಟ್ಟೆನು; ಹಗಲಾಗಲಿ ಇರುಳಾಗಲಿ ಕದ್ದುಹೋದದ್ದರ ಲೆಕ್ಕವನ್ನು ನನ್ನಿಂದಲೇ ತೆಗೆದುಕೊಂಡಿ;


ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ.


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದನಂತರ ನಿಮಗೆ ಮೇಲನ್ನುಂಟುಮಾಡಬೇಕೆಂಬ ಉದ್ದೇಶದಿಂದ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾರಣ್ಯವನ್ನೂ ನೀರು ಬತ್ತಿಹೋದ ಭೂವಿುಗಳನ್ನೂ ದಾಟಿಸಿ ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟು ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು ಮನಸ್ಸಿನೊಳಗೆ -


ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂವಿುಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ, ಇವುಗಳಿಗೆಲ್ಲಾ ಹಾಳುದೆಶೆ ತಂದಿದ್ದೇನೆ.


ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು