Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:41 - ಕನ್ನಡ ಸತ್ಯವೇದವು J.V. (BSI)

41 ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:41
12 ತಿಳಿವುಗಳ ಹೋಲಿಕೆ  

ಅವನು ಚಪಲಚಿತ್ತನಾಗಿ ಹತ್ತುಸಾರಿ ನನ್ನ ಸಂಬಳವನ್ನು ಬದಲಾಯಿಸಿ ವಂಚಿಸಿದರೂ ನನಗೆ ಕೇಡುಮಾಡುವದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ನಾನು ಇಪ್ಪತ್ತು ವರುಷ ನಿನ್ನ ಬಳಿಯಲ್ಲಿದ್ದೆನಲ್ಲಾ. ನಿನ್ನ ಆಡುಕುರಿಗಳು ಕಂದು ಹಾಕಲಿಲ್ಲ; ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;


ಅಂದರೆ ನಿನ್ನಣ್ಣನ ಕೋಪವು ಶಮನವಾಗುವವರೆಗೂ, ಅವನ ಬಳಿಯಲ್ಲಿರು.


ಆಮೇಲೆ ಲಾಬಾನನು ಅವನನ್ನು - ನೀನು ನನ್ನನ್ನು ಸಂಬಂಧಿಯೆಂದು ಸುಮ್ಮನೆ ಸೇವಿಸುವದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ ಎಂದು ಕೇಳಿದನು.


ನಾನು ನಿನಗೆ ಏನು ಕೊಡಬೇಕು ಹೇಳು, ಕೊಡುತ್ತೇನೆ ಎಂದು ಹೇಳಿದನು.


ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು; ನಿದ್ದೆ ಮಾಡುವದಕ್ಕಾದರೂ ಅವಕಾಶವಾಗಲಿಲ್ಲ; ನನ್ನ ಸ್ಥಿತಿ ಹೀಗಿತ್ತು.


ಕಳುಹಿಸುವಾಗ ಅವರಿಗೆ - ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ - ನಿನ್ನ ಸೇವಕನಾದ ಯಾಕೋಬನು ಇಷ್ಟು ದಿವಸ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು;


ನಾನು ನಿಮ್ಮ ತಂದೆಯ ಸೇವೆಯನ್ನು ಸಾಹಸದಿಂದ ಮಾಡಿದ್ದೇನೆ; ನೀವೂ ಅದನ್ನು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು