Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:46 - ಕನ್ನಡ ಸತ್ಯವೇದವು J.V. (BSI)

46 ಯಾಕೋಬನು ತನ್ನ ಕಡೆಯವರಿಗೆ - ಕಲ್ಲುಗಳನ್ನು ಕೂಡಿಸಿರಿ ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಕುಪ್ಪೆಯನ್ನು ಮಾಡಿದಾಗ ಅವರೆಲ್ಲರೂ ಆ ಕುಪ್ಪೆಯ ಬಳಿಯಲ್ಲಿ ಸಹ ಭೋಜನವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅದಲ್ಲದೆ, ತನ್ನ ಕಡೆಯವರಿಗೆ, “ಕಲ್ಲುಗಳನ್ನು ಒಟ್ಟುಗೂಡಿಸಿರಿ,” ಎನ್ನಲು, ಅವರು ಕಲ್ಲುಗಳನ್ನು ತಂದು ಒಂದು ಕುಪ್ಪೆ ಮಾಡಿದರು; ಅದರ ಬಳಿಯಲ್ಲೆ ಕುಳಿತು ಸಹಭೋಜನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಅವನು ತನ್ನ ಜನರಿಗೆ ಮತ್ತಷ್ಟು ಕಲ್ಲುಗಳನ್ನು ತೆಗೆದುಕೊಂಡು ಬಂದು ಕಲ್ಲಿನ ಕುಪ್ಪೆ ಮಾಡುವಂತೆ ಹೇಳಿದನು. ಬಳಿಕ ಅವರು ಆ ಕುಪ್ಪೆಯ ಬಳಿಯಲ್ಲಿ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ,” ಎಂದನು. ಅವರು ಕಲ್ಲುಗಳನ್ನು ತೆಗೆದುಕೊಂಡು ಒಂದು ಕುಪ್ಪೆ ಮಾಡಿದರು. ಅವರು ಆ ಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:46
11 ತಿಳಿವುಗಳ ಹೋಲಿಕೆ  

ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪುವ ಸಮಯ, ಅಪ್ಪದಿರುವ ಸಮಯ,


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ಬಲುದೊಡ್ಡ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.


ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು.


ನನ್ನ ಸಾಮಾನನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನವರ ಮುಂದೆಯೂ ನಿನ್ನವರ ಮುಂದೆಯೂ ಅದನ್ನು ತಂದಿಡು ನೋಡೋಣ; ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.


ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ. ನಮ್ಮ ಬಂಧುಗಳ ಎದುರಾಗಿ ನನ್ನ ಸೊತ್ತನ್ನು ಪರೀಕ್ಷಿಸಬಹುದು; ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.


ಅವನು ತನ್ನ ಬಂಧು ಜನರನ್ನು ಕೂಡಿಕೊಂಡು, ಏಳುದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ, ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.


ಆಗ ಯಾಕೋಬನು ಕಲ್ಲನ್ನು ತೆಗೆದುಕೊಂಡು ಕಂಬವಾಗಿ ನಿಲ್ಲಿಸಿದನು.


ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದೂ ಯಾಕೋಬನು ಗಲೇದ್ ಎಂದೂ ಹೆಸರಿಟ್ಟರು. ಲಾಬಾನನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು