ಆದಿಕಾಂಡ 31:5 - ಕನ್ನಡ ಸತ್ಯವೇದವು J.V. (BSI)5 ಅವರಿಗೆ ಹೇಳಿದ್ದೇನಂದರೆ - ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಲ್ಲಿ ಅವರಿಗೆ, “ನನ್ನ ವಿಷಯದಲ್ಲಿ ನಿಮ್ಮ ತಂದೆಯ ಮನೋಭಾವ ಮೊದಲಿದ್ದಂತೆ ಇಲ್ಲವೆಂದು ಕಂಡುಬಂದಿದೆ. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೋಬನು, ರಾಹೇಲಳಿಗೆ ಮತ್ತು ಲೇಯಾಳಿಗೆ, “ನಿಮ್ಮ ತಂದೆ ನನ್ನ ಮೇಲೆ ಕೋಪದಿಂದಿರುವುದನ್ನು ನಾನು ಗಮನಿಸಿದ್ದೇನೆ. ಮೊದಲು ಅವನು ನನ್ನೊಂದಿಗೆ ಸ್ನೇಹದಿಂದಿದ್ದನು. ಆದರೆ ಈಗ ಅವನು ಸ್ನೇಹದಿಂದಿಲ್ಲ. ಆದರೆ ನನ್ನ ತಂದೆಯ ದೇವರು ನನ್ನೊಂದಿಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರಿಗೆ, “ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದ ಹಾಗೆ ಈಗ ಇಲ್ಲದಿರುವುದನ್ನು ನಾನು ನೋಡಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಕಡೆಗೆ ಇದ್ದಾರೆ. ಅಧ್ಯಾಯವನ್ನು ನೋಡಿ |
ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.