Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:54 - ಕನ್ನಡ ಸತ್ಯವೇದವು J.V. (BSI)

54 ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:54
7 ತಿಳಿವುಗಳ ಹೋಲಿಕೆ  

ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.


ಆಮೇಲೆ ಅವರು ಊಟಕ್ಕೆ ಕೂತುಕೊಂಡರು. ಅಷ್ಟರಲ್ಲಿ ಅವರು ಕಣ್ಣೆತ್ತಿ ನೋಡಿ ಇಷ್ಮಾಯೇಲ್ಯರ ಗುಂಪು ಒಂಟೆಗಳ ಮೇಲೆ ಹಾಲುಮಡ್ಡಿ, ಸುಗಂಧತೈಲ, ರಕ್ತಬೋಳ ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವದನ್ನು ಕಂಡರು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು; ಅವರೆಲ್ಲರೂ ಭೋಜನೋಪಚಾರಗಳನ್ನು ತೀರಿಸಿಕೊಂಡು


ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.


ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.


ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಹವಿರ್ಭೋಜನಮಾಡುವದಕ್ಕೆ ಇಲ್ಲಿ ಪ್ರಭುವಾಗಿ ಕೂತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು