13-15 ಯಕೋಬನು ಆ ರಾತ್ರಿಯನ್ನು ಅಲ್ಲೇ ಕಳೆದನು. ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ, ಇಪ್ಪತ್ತು ಟಗರು, ಹಾಲು ಕರೆಯುವ ಮೂವತ್ತು ಒಂಟೆ ಮತ್ತು ಅವುಗಳ ಮರಿ, ನಲವತ್ತು ಆಕಳು, ಹತ್ತು ಹೋರಿ, ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತನ್ನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.
ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವದರಲ್ಲಿ ಕೊಡು ಎಂದು ಹೇಳಿರಿ ಅಂದು ಅವರನ್ನು ಕಳುಹಿಸಿದನು.
ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.
ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.