Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:21 - ಕನ್ನಡ ಸತ್ಯವೇದವು J.V. (BSI)

21 ಆದಕಾರಣ ಅವನು ಆ ಕಾಣಿಕೆಯನ್ನು ತನಗೆ ಮುಂಚಿತವಾಗಿ ಹೊಳೆಯಿಂದಾಚೆಗೆ ದಾಟಿಸಿ ತಾನು ಆ ರಾತ್ರಿ ತನ್ನ ಪಾಳೆಯದೊಳಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದಕಾರಣ ಅವನು ಆ ಕಾಣಿಕೆಯನ್ನು ಮುಂಚಿತವಾಗಿ ಕಳಿಸಿ, ತಾನು ಆ ರಾತ್ರಿ ಆ ತನ್ನ ಪಾಳೆಯದೊಳಗೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೋಬನು ಏಸಾವನಿಗೆ ಉಡುಗೊರೆಗಳನ್ನು ಕಳುಹಿಸಿ ಆ ರಾತ್ರಿ ಪಾಳೆಯದಲ್ಲಿ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:21
7 ತಿಳಿವುಗಳ ಹೋಲಿಕೆ  

ಇದೇ ರೀತಿಯಾಗಿ ಮಾತಾಡಿ - ನಿಮ್ಮ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಾನೆ ಅನ್ನಿರಿ ಎಂದು ಅಪ್ಪಣೆಕೊಟ್ಟನು. ಯಾಕೋಬನು ತನ್ನೊಳಗೆ - ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ಅವನ ಸನ್ನಿಧಿಗೆ ಸೇರುವೆನು; ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು ಅಂದುಕೊಂಡನು.


ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ಅವರು ಹೊಂಚುಹಾಕುವದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.


ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ ಎಂದು ಹೇಳಿ ಅವರನ್ನು ಕಳುಹಿಸಿದಳು; ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.


ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು