Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:22 - ಕನ್ನಡ ಸತ್ಯವೇದವು J.V. (BSI)

22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ರಾತ್ರಿ ಯಕೋಬನು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ‘ಯಬ್ಬೋಕ್’ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:22
10 ತಿಳಿವುಗಳ ಹೋಲಿಕೆ  

ಗಿಲ್ಯಾದ್ ಮೊದಲುಗೊಂಡು [ದಕ್ಷಿಣಕಡೆಯಲ್ಲಿ] ಅರ್ನೋನ್ ತಗ್ಗಿನವರೆಗೂ [ಪೂರ್ವಕಡೆಯಲ್ಲಿ] ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ [ದಕ್ಷಿಣ] ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ [ಪೂರ್ವದಿಕ್ಕಿನ] ಮೇರೆ.


ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರವಿುಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನಷ್ಟೆ.


ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ.


[ಅವರಲ್ಲಿ ಮೊದಲನೆಯವನು] ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನ್ ಎಂಬವನು. ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧ ಪ್ರಾಂತವು,


ಆದರೆ ರಾಹೇಲಳು ಸತ್ತುಹೋದಳು; ಪ್ರಾಣಹೋಗುತ್ತಿರುವಾಗ ಆಕೆಯು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅದರ ತಂದೆಯು ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಲಳು ಮೃತಪಟ್ಟಳು.


ತರುವಾಯ ಯಾಕೋಬನು ಲಾಬಾನನಿಗೆ - ಗೊತ್ತುಮಾಡಿದ ಕಾಲವು ಮುಗಿದು ಹೋಯಿತು; ಆಕೆಯನ್ನು ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡು ಎಂದು ಹೇಳಿದನು.


ಆದಕಾರಣ ಅವನು ಆ ಕಾಣಿಕೆಯನ್ನು ತನಗೆ ಮುಂಚಿತವಾಗಿ ಹೊಳೆಯಿಂದಾಚೆಗೆ ದಾಟಿಸಿ ತಾನು ಆ ರಾತ್ರಿ ತನ್ನ ಪಾಳೆಯದೊಳಗೆ ಇದ್ದನು.


ಅವರನ್ನೂ ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ


ಆ ಅರಸನು ದೂತರಿಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ಕಸಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು