Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:25 - ಕನ್ನಡ ಸತ್ಯವೇದವು J.V. (BSI)

25 ಆ ಪುರುಷನು ತಾನು ಗೆಲ್ಲದೆ ಇರುವದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಪುರುಷ ತಾನು ಗೆಲ್ಲದೆ ಇರುವುದನ್ನು ಕಂಡು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಹೋರಾಡುತ್ತಿರುವಾಗಲೆ ಯಕೋಬನ ತೊಡೆಯ ಕೀಲು ತಪ್ಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾಕೋಬನನ್ನು ಸೋಲಿಸಲು ತನಗೆ ಸಾಧ್ಯವಾಗದಿರುವುದನ್ನು ಗಮನಿಸಿದ ಆ ಪುರುಷನು ಯಾಕೋಬನ ತೊಡೆಯನ್ನು ಮುಟ್ಟಿದನು. ಆಗ ಯಾಕೋಬನ ಕೀಲು ತಪ್ಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ಮನುಷ್ಯನು ಅವನನ್ನು ಜಯಿಸದೆ ಇರುವುದನ್ನು ಕಂಡು, ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಸಂಗಡ ಹೋರಾಡುತ್ತಿರುವಾಗಲೇ ಯಾಕೋಬನ ತೊಡೆಯ ಕೀಲು ತಪ್ಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:25
14 ತಿಳಿವುಗಳ ಹೋಲಿಕೆ  

ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.


[ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವದಿಲ್ಲ.


ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಅಲ್ಲಿಗೆ ಮುಟ್ಟುವ ತನಕ ನಾನೇನೂ ಮಾಡುವದಕ್ಕಾಗುವದಿಲ್ಲ ಅಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಆಮೇಲೆ ತಿರಿಗಿ ಅವರನ್ನು ಬಿಟ್ಟುಹೋಗಿ ತಿರಿಗಿ ಅದೇ ಮಾತನ್ನು ಹೇಳುತ್ತಾ ಮೂರನೆಯ ಸಾರಿ ಪ್ರಾರ್ಥಿಸಿದನು.


ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು