Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:26 - ಕನ್ನಡ ಸತ್ಯವೇದವು J.V. (BSI)

26 ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:26
19 ತಿಳಿವುಗಳ ಹೋಲಿಕೆ  

ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;


ದೇವರೇ, ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸು; ಪ್ರಸನ್ನ ಮುಖದಿಂದ ನಮ್ಮನ್ನು ನೋಡು. ಸೆಲಾ.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ, ಸೇರುವ ತನಕ ಬಿಡದೆ ಹಿಡಿದುಕೊಂಡೇ ಹೋದೆನು.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.


ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ.


[ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ.


ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂವಿುಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ಆ ಪುರುಷನು ತಾನು ಗೆಲ್ಲದೆ ಇರುವದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.


ಆ ಪುರುಷನು - ನಿನ್ನ ಹೆಸರೇನು ಎಂದು ಕೇಳಿದ್ದಕ್ಕೆ ಅವನು - ಯಾಕೋಬನು ಅಂದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು