Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:28 - ಕನ್ನಡ ಸತ್ಯವೇದವು J.V. (BSI)

28 ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:28
24 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ದೇವರು ಅವನಿಗೆ - ನಿನ್ನ ಹೆಸರು ಯಾಕೋಬನಲ್ಲವೇ; ಇನ್ನು ಮೇಲೆ ನೀನು ಯಾಕೋಬನೆನಿಸಿಕೊಳ್ಳದೆ ಇಸ್ರಾಯೇಲನೆನಿಸಿಕೊಳ್ಳಬೇಕು ಎಂದು ಹೇಳಿ ಅವನಿಗೆ ಇಸ್ರಾಯೇಲ ಎಂದು ಹೆಸರಿಟ್ಟನು.


ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲ ಪಿತೃವಾಗಿ ನೇವಿುಸಿರುವದರಿಂದ ನಿನಗೆ ಅಬ್ರಹಾಮನೆಂದು ಹೆಸರಿರುವದು.


ಇದಲ್ಲದೆ ದೇವರು ಅಬ್ರಹಾಮನಿಗೆ - ನೀನು ಇನ್ನು ಮುಂದೆ ನಿನ್ನ ಪತ್ನಿಯನ್ನು ಸಾರಯಳೆಂದು ಕರೆಯದೆ ಸಾರಾ ಎಂದು ಕರೆಯಬೇಕು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಆದರೆ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಕಣ್ಣೀರು ಸುರಿಸಿದರು.


ಅವನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. (ಮೆಸ್ಸೀಯನು ಅಂದರೆ ಕ್ರಿಸ್ತನು. ) ಯೇಸು ಅವನನ್ನು ನೋಡಿ - ನೀನು ಯೋಹಾನನ ಮಗನಾದ ಸೀಮೋನನು; ಇನ್ನು ಮೇಲೆ ಕೇಫನೆನಿಸಿಕೊಳ್ಳುವಿ ಅಂದನು (ಕೇಫನಂದರೆ ಪೇತ್ರ. )


ಯಾಕೋಬನು ಅವನಿಗೆ - ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿಬಿಡು ಅನ್ನಲು ಏಸಾವನು -


ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ; ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಧರ್ಮಶಾಸ್ತ್ರಗಳನ್ನು ಅನುಸರಿಸುವದಿಲ್ಲ.


ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು.


ಆಗ ಸೌಲನು ದಾವೀದನಿಗೆ - ನನ್ನ ಮಗನೇ, ದಾವೀದನೇ, ನೀನು ಆಶೀರ್ವಾದ ಹೊಂದು; ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.


ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು - ನೋಡಿಕೋ, ನೀನು ಯಾಕೋಬನಿಗೆ ಏನೂ ಅನ್ನಬೇಡ ಎಂದು ಹೇಳಿದನು.


ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.


ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು


ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಆ ಪುರುಷನು - ನಿನ್ನ ಹೆಸರೇನು ಎಂದು ಕೇಳಿದ್ದಕ್ಕೆ ಅವನು - ಯಾಕೋಬನು ಅಂದಾಗ,


ಅಬ್ರಹಾಮನು ಇಸಾಕನನ್ನು ಪಡೆದನು; ಏಸಾವ ಇಸ್ರಾಯೇಲರು ಇಸಾಕನ ಮಕ್ಕಳು.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು