Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:29 - ಕನ್ನಡ ಸತ್ಯವೇದವು J.V. (BSI)

29 ಯಾಕೋಬನು - ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು - ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:29
18 ತಿಳಿವುಗಳ ಹೋಲಿಕೆ  

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲಿಯಾ? ಸರ್ವಶಕ್ತನನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?


ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಟಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂವಿುಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಯಾಕೋಬನು ಪದ್ದನ್ಅರಾವಿುನಿಂದ ಬಂದಾಗ ದೇವರು ತಿರಿಗಿ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.


ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲ ಪಿತೃವಾಗಿ ನೇವಿುಸಿರುವದರಿಂದ ನಿನಗೆ ಅಬ್ರಹಾಮನೆಂದು ಹೆಸರಿರುವದು.


ದೇವರು ಅವನಿಗೆ - ನಿನ್ನ ಹೆಸರು ಯಾಕೋಬನಲ್ಲವೇ; ಇನ್ನು ಮೇಲೆ ನೀನು ಯಾಕೋಬನೆನಿಸಿಕೊಳ್ಳದೆ ಇಸ್ರಾಯೇಲನೆನಿಸಿಕೊಳ್ಳಬೇಕು ಎಂದು ಹೇಳಿ ಅವನಿಗೆ ಇಸ್ರಾಯೇಲ ಎಂದು ಹೆಸರಿಟ್ಟನು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ತಮ್ಮ ಸಂಬಂಧಿಕರಾದ ಇಸ್ರಾಯೇಲ್ಯರು ಕೇಳಿಕೊಳ್ಳುವದೇನಂದರೆ - ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಷ್ಟೆ.


ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು


ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ; ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಧರ್ಮಶಾಸ್ತ್ರಗಳನ್ನು ಅನುಸರಿಸುವದಿಲ್ಲ.


ಅಬ್ರಹಾಮನು ಇಸಾಕನನ್ನು ಪಡೆದನು; ಏಸಾವ ಇಸ್ರಾಯೇಲರು ಇಸಾಕನ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು