Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:3 - ಕನ್ನಡ ಸತ್ಯವೇದವು J.V. (BSI)

3 ಬಳಿಕ ಯಾಕೋಬನು ಎದೋಮ್ಯರ ದೇಶವಾಗಿರುವ ಸೇಯೀರ್‍ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ಮುಂದೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:3
23 ತಿಳಿವುಗಳ ಹೋಲಿಕೆ  

ಇಸಾಕನಿಗೆ ಯಾಕೋಬ್, ಏಸಾವ್ ಎಂಬಿಬ್ಬರು ಮಕ್ಕಳನ್ನು ಅನುಗ್ರಹಿಸಿ ಏಸಾವನಿಗೆ ಸೇಯೀರ್ ಪರ್ವತವನ್ನು ಸ್ವಾಸ್ತ್ಯವಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.


ಅವನಿಗೆ - ನಾನು ಬಹು ದಣಿದು ಬಂದಿದ್ದೇನೆ; ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವದಕ್ಕೆ ಕೊಡಪ್ಪಾ ಎಂದು ಹೇಳಿದನು. (ಈ ಸಂಗತಿಯಿಂದ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)


ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ.


ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೊರಡಬಹುದು. ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ ಅಂದನು.


ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ ಮರಳುಕಾಡಿನ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು.


ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,


ಏಸಾವನು ಆ ದಿವಸವೇ ಸೇಯೀರ್ ಸೀಮೆಗೆ ಹೊರಟು ಹೋದನು.


ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ -


ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಿಯನ್ನೂ ಕೊಲ್ಲುವನೋ ಏನೋ ಎಂದು ನನಗೆ ಭಯವದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ಅದಲ್ಲದೆ ಎದೋಮ್ಯರ ದೇಶವನ್ನೂ ಸ್ವಾಧೀನ ಪಡಿಸಿಕೊಂಡಿದ್ದಾನೆ; ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.


[ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‍ಬರ್ನೇಯದವರೆಗೆ ಹನ್ನೊಂದು ದಿನದ ದಾರಿ.]


ದೂಮದ ವಿಷಯವಾದ ದೈವೋಕ್ತಿ. ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು, ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು ಎಂಬ ಕೂಗು ಸೇಯೀರಿನಿಂದ ನನಗೆ ಕೇಳಿಸುತ್ತಿತ್ತು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಯಾಯೀರನ ಗ್ರಾಮಗಳೆನಿಸಿಕೊಳ್ಳುವ ಅರುವತ್ತು ಊರುಗಳು ಇದರಲ್ಲೇ ಇರುತ್ತವೆ.


ಸೌಲನ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿವಿುಗೆ ಒಯ್ದು


ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪು ಗುಂಪುಗಳಾಗಿ ಬಂದ ಯುದ್ಧಸನ್ನದ್ಧರ ಲೆಕ್ಕ -


ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಚರಣಗಳು ಎಷ್ಟೋ ಚಂದ! ದುಂಡಾದ ನಿನ್ನ ತೊಡೆಗಳು ಕುಶಲಶಿಲ್ಪಿಯು ಮಾಡಿದ ಆಭರಣಗಳಂತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು