ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.
ಹೊತ್ತು ಮೂಡುವದಕ್ಕೆ ಮುಂಚೆ ಆ ದೂತರು ಲೋಟನಿಗೆ - ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣು ಮಕ್ಕಳನ್ನೂ ಬೇಗ ಕರಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು ಎಂದು ಹೇಳಿ ತ್ವರೆಪಡಿಸಿದರು.
ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.
ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು.
ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು?
ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು