Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:5 - ಕನ್ನಡ ಸತ್ಯವೇದವು J.V. (BSI)

5 ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:5
13 ತಿಳಿವುಗಳ ಹೋಲಿಕೆ  

ಏಸಾವನು - ನಾನು ದಾರಿಯಲ್ಲಿ ಕಂಡ ಆ ಪಶುಗಳ ಹಿಂಡುಗಳು ಯಾತಕ್ಕೆ ಎಂದು ಕೇಳಲು ಯಾಕೋಬನು - ಸ್ವಾವಿುಯವರ ದಯ ನನಗೆ ದೊರಕಬೇಕೆಂದು ನಾನು ತಮಗೆ ಕಳುಹಿಸಿಕೊಟ್ಟೆನು ಅಂದನು.


ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.


ನನ್ನ ಬಿನ್ನಹವೇನು? ನನಗೆ ದಾನಮಾಡಿರಿ ಎಂದು ಬಿನ್ನವಿಸಿದೆನೋ? ನಿಮ್ಮ ಆಸ್ತಿಯಿಂದ ನನಗಾಗಿ ಲಂಚಕೊಡಿರಿ ಎಂದೆನೋ?


ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು.


ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆಮೇಲೆ ಆಕೆಯ ಮೋರೆಯಲ್ಲಿ ದುಃಖವು ಕಾಣಲಿಲ್ಲ.


ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.


ಅದಕ್ಕೆ ಅವರು - ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾವಿುಯ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ ಅಂದರು.


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಆಗಲಿ; ದೇವರು ನಮ್ಮ ತಂದೆಯಿಂದ ತೆಗೆದ ಆಸ್ತಿಯೆಲ್ಲಾ ನಮಗೂ ನಮ್ಮ ಮಕ್ಕಳಿಗೂ ಬಂತಲ್ಲಾ. ಆದದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು ಎಂದು ಉತ್ತರ ಕೊಟ್ಟರು.


ಯಾಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ದೊಡ್ಡ ಹಿಂಡುಗಳೂ ದಾಸದಾಸಿಯರೂ ಒಂಟೆಕತ್ತೆಗಳೂ ಹೇರಳವಾಗಿದ್ದವು.


ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ


ಮತ್ತು ಯೆಹೋವನು ಅವನಿಗೆ - ನಿನ್ನ ತಂದೆತಾತಂದಿರ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು; ನಾನು ನಿನ್ನೊಂದಿಗೆ ಇರುವೆನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು