Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:6 - ಕನ್ನಡ ಸತ್ಯವೇದವು J.V. (BSI)

6 ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:6
14 ತಿಳಿವುಗಳ ಹೋಲಿಕೆ  

ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಮನುಷ್ಯರ ಸಮೇತ ಬರುವದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ


ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು.


ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಿಯನ್ನೂ ಕೊಲ್ಲುವನೋ ಏನೋ ಎಂದು ನನಗೆ ಭಯವದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ಏಸಾವನು ಒಂದು ಪಾಳೆಯದ ಮೇಲೆ ಬಿದ್ದರೂ ಮತ್ತೊಂದು ಪಾಳೆಯವು ತಪ್ಪಿಸಿಕೊಂಡು ಹೋಗುವದು ಅಂದುಕೊಂಡನು.


ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ -


ತಾನು ಗಳಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ ಪದ್ದನ್ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವದಕ್ಕಾಗಿ ಹೊರಟನು.


ಏಸಾವನು - ನಾನು ದಾರಿಯಲ್ಲಿ ಕಂಡ ಆ ಪಶುಗಳ ಹಿಂಡುಗಳು ಯಾತಕ್ಕೆ ಎಂದು ಕೇಳಲು ಯಾಕೋಬನು - ಸ್ವಾವಿುಯವರ ದಯ ನನಗೆ ದೊರಕಬೇಕೆಂದು ನಾನು ತಮಗೆ ಕಳುಹಿಸಿಕೊಟ್ಟೆನು ಅಂದನು.


ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.


ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ - ನಿಮ್ಮ ದಯೆ ನನ್ನ ಮೇಲೆ ಇರಲಿ; ನೀವು ಹೇಳುವಷ್ಟು ಕೊಡುತ್ತೇನೆ;


ಅದಕ್ಕೆ ಅವರು - ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾವಿುಯ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ ಅಂದರು.


ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.


ಆಗ ಆಕೆಯು - ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತಾಡಿಸಿದಿರಿ ಅಂದಳು.


ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆಮೇಲೆ ಆಕೆಯ ಮೋರೆಯಲ್ಲಿ ದುಃಖವು ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು